ಸುದ್ದಿ

ಪಶುಸಂಗೋಪನೆ ಇಲಾಖೆಯಲ್ಲಿ 700 ಹುದ್ದೆ ನೇಮಕ

Share It

ಬೆಂಗಳೂರು (ವಿಧಾನಪರಿಷತ್‌): ಮುಂದಿನ ಆರ್ಥಿಕ ವರ್ಷದಲ್ಲಿ ಡಿ ವೃಂದದ 700 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.

ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಡಿ ವೃಂದದ 700 ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲಾಗುವುದು ಎಂದರು.

ಕಾಂಗ್ರೆಸ್‌ ನ ಎಂ. ನಾಗರಾಜ ಪ್ರಶ್ನೆಗೆ ಉತ್ತರಿಸಿ, 32 ಪಶುವೈದ್ಯಕೀಯ ಪರೀಕ್ಷಕರ ಹುದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಪೈಕಿ 27 ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದರು.


Share It

You cannot copy content of this page