ಬೆಂಗಳೂರು (ವಿಧಾನ ಪರಿಷತ್): ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಕಡ್ಡಾಯವಾಗಿ ಹೊರಗೆ ಖಾಸಗಿ ಪ್ರಾಕ್ಟಿಸ್ ಮಾಡುವಂತಿಲ್ಲ. ಇದರ ಮೇಲ್ವಿಚಾರಣೆಗಾಗಿ 4 ಬಾರಿ ಬಯೋಮೆಟ್ರಿಕ್ ಹಾಜರಾತಿ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಕಾಂಗ್ರೆಸ್ ಸದಸ್ಯೆ ಬಲ್ಕಿಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು. ಆಸ್ಪತ್ರೆಯಲ್ಲಿರುವ ಎಲ್ಲ ವೈದ್ಯರು ಎಂಬಿಬಿಎಸ್ ಮುಗಿಸಿರುವವರೇ ಆಗಿರುತ್ತಾರೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯದ ಅವಧಿಯಲ್ಲಿ ಹೊರಗೆ ಪ್ರಾಕ್ಟಿಸ್ ಮಾಡುವಂತಿಲ್ಲ ಎಂದು ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. 4 ಬಾರಿ ಬಯೋಮೆಟ್ರಿಕ್ ಪಡೆದು ಅದರ ಆಧಾರದ ಮೇಲೆ ವೇತನ ಪಾವತಿ ಮಾಡಲಾಗುತ್ತಿದೆ ಎಂದು ಹೇಳಿದರು.