ಬೆಂಗಳೂರು (ವಿಧಾನ ಪರಿಷತ್) ರೈತರ ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ ಏಳು ಗಂಟೆಯ ಜೊತೆಗೆ ಹೆಚ್ಚುವರಿಯಾಗಿ ಎರಡು ತಾಸು 3 ಫೇಸ್ ವಿದ್ಯುತ್ ಪೂರೈಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾಜ್೯ ತಿಳಿಸಿದರು.
ಕಾಂಗ್ರೆಸ್ ನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಜಾಜ್೯ ಈಗ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸಾಧ್ಯವಿರುವಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದರು.
ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರವಾಗಿ ಏಳು ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ತಾಂತ್ರಿಕ ಸಾಧ್ಯತೆ ಇಲ್ಲದಿರುವ ವೇಳೆ ವಿದ್ಯುತ್ ಉಪಕೇಂದ್ರಗಳಿಂದ ಪಾಳಿಯಲ್ಲಿ ಹಗಲು 4 ಗಂಟೆ, ರಾತ್ರಿ 3 ಗಂಟೆ ಕಾಲ 3 ಫೇಸ್ ವಿದ್ಯುತ್ ನೀಡಲಾಗುತ್ತಿದೆ.
ಕೆಲವು ಕಡೆ ನಿರಂತರವಾಗಿ 7 ಗಂಟೆ ಪೂರೈಕೆ ಮಾಡಿದರೆ ವಂಪ್‌ಸೆಟ್‌ಗಳಿಗೆ ಸಾಮರ್ಥ್ಯವಿಲ್ಲ ಎಂದು ರೈತರೇ ಹೇಳುತ್ತಿದ್ದಾರೆ. ಹೀಗಾಗಿ ಎರಡು ಪಾಳಿಯಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ ಎಂದು ಸಚಿವರು ಸ್ಪಷ್ಟನೆ ನೀಡಿದರು.