ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಿಲೀಫ್ ಕೊಟ್ಟಿದೆ. ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ.
ಇದರೊಂದಿಗೆ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಲಾಗಿದೆ. ಅರ್ಜಿಯ ವಿವರವಾದ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೇಳಿರುವ ಕೋರ್ಟ್ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.
ಬಿ ಎಸ್ ಯಡಿಯೂರಪ್ಪ ಅವರ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ನಿವಾಸಕ್ಕೆ ಸಹಾಯ ಕೇಳಿಕೊಂಡು ತಾಯಿ ಮತ್ತು ಅವರ ಅಪ್ರಾಪ್ತ ಮಗಳು ಹೋಗಿದ್ದರು. ಈ ವೇಳೆ ಬಾಲಕಿಯನ್ನು ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ನೀಡಿದ ದೂರಿನನ್ವಯ ಯಡಿಯೂರಪ್ಪ ಅವರ ವಿರುದ್ಧ ಪೋಕೋ ಕೇಸ್ ದಾಖಲಾಗಿತ್ತು.