ಸುದ್ದಿ

ಅಪಾರ್ಟೆಂಟ್ ನ ಐದನೇ ಮಹಡಿಯಿಂದ ಬಿದ್ದು ಬಾಲಕ ಸಾವು

Share It

ಮಂಗಳೂರು: ಅಪಾರ್ಟೆಂಟ್ ನಿಂದ ಬಿದ್ದು
ಬಾಲಕ ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ನಗರದ ಮೇರಿಹಿಲ್ ಮಾತಾ ರೆಸಿಡೆನ್ಸಿ ಅಪಾರ್ಟೆಂಟ್ ನಿಂದ ಬಿದ್ದು ಬಾಲಕ ದಾರುಣ ಸಾವು ನಡೆದಿದೆ. ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಸಮರ್ಜಿತ್ (12) ಮೃತ ಬಾಲಕ.

ಶನಿವಾರ ಮುಂಜಾನೆ ಯಾವುದೋ ಕಾರಣಕ್ಕೆ ಸ್ನೇಹಿತರೊಂದಿಗೆ ವಸತಿ ಸಮುಚ್ಚಯದ 5ನೇ ಮಹಡಿಗೆ ತೆರಳಿದ್ದು, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಕೊನೆಯುಸಿರೆಳೆದಿದ್ದಾನೆ.ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.


Share It
<p>You cannot copy content of this page</p>