ಬೆಂಗಳೂರು (ವಿಧಾನಸಭೆ): ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇರವುದಿಲ್ಲ ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಂಡಿಸಿದ ಗೊತ್ತುವಳಿ ಮೇಲೆ ಅವರು ಮಾತನಾಡಿದರು.ಕೋವಿಡ್ ಸಂದರ್ಭದಲ್ಲಿ ಕೃಪಾಂಕ ನೀಡುವ ಪರಿಪಾಟ ಆರಂಭಿಸಲಾಯಿತು. ಈ ವರ್ಷದಿಂದ ಅದನ್ನು ಸಂಪೂರ್ಣ ತೆಗೆದುಹಾಕಿದ್ದೇವೆ ಎಂದು ಹೇಳಿದರು.
ಈ ಬಾರಿ ಕೆಲವರು ಆನ್‌ಲೈನ್ ಮೂಲಕ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣ ವಸೂಲಿಗೆ ಇಳಿದಿದ್ದಾರೆ. ಇಂತಹವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿರೋಧಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದರು. ಇಂತಹ ಪ್ರಕರಣಗಳನ್ನು ಇಲಾಖೆ ವತಿಯಿಂದ ಪತ್ತೆ ಮಾಡಿಸಿ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.