ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2025ನೇ ಸಾಲಿನ ‘ವರನಟ ಡಾ.ರಾಜಕುಮಾರ್ ಪ್ರಶಸ್ತಿ’ಗೆ ಹಿರಿಯ ಸಾಹಿತಿ,ಚಿಂತಕ ಡಾ.ಬರಗೂರು ರಾಮಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ನಾಡು, ನುಡಿಗೆ ಅನನ್ಯ ಸೇವೆ ಸಲ್ಲಿಸುವ ಸಾಧಕರಿಗೆ ಪ್ರತಿವರ್ಷ ನೀಡುವ ಈ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಏ.18ರಂದು ಸಂಜೆ 5 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಡಾ.ಎಚ್.ಎಸ್.ರಾಘವೇಂದ್ರರಾವ್ ಪ್ರಶಸ್ತಿ ಪ್ರದಾನ ಮಾಡಲಿದಾರೆ. ನಿರ್ದೇಶಕ ಎಸ್.ವಿ.ರಾಜೇಂದ.ಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷರಾದ ಸಿ.ಕೆ ರಾಮೇಗೌಡ ತಿಳಿಸಿದ್ದಾರೆ