ಬೆಂಗಳೂರು: ವೇತನ ಹೆಚ್ಚಳ, ಬಾಕಿ ಹಣ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜ. 1ರಿಂದ 2023ರ ಫೆ. 28ರವರೆಗಿನ 38 ತಿಂಗಳ ವೇತನ ಹಿಂಬಾಕಿ ಪಾವತಿ, 2024ರ ಜ. 1ರಿಂದ ಆಗಬೇಕಿದ್ದ ವೇತನ ಪರಿಷ್ಕರಣೆ ಮಾಡುವಲ್ಲಿ ವಿಳಂಬ ಮಾಡಲಾಗುತ್ತಿದೆ.
ಈ ಹಿಂದೆ ಬೇಡಿಕೆ ಈಡೇರಿಕೆಗೆ ಹಲವು ಬಾರಿ ಮನವಿ ಮಾಡಲಾಗಿದ್ದರೂ, ಅದನ್ನು ಈಡೇರಿಸುವಲ್ಲಿ ಸರ್ಕಾರ ಮುಂದಾಗಿಲ್ಲ. ನಿಗಮಗಳ ಆದಾಯ ಹೆಚ್ಚಳಕ್ಕೆ ಬಸ್ ದರ ಪರಿಷ್ಕರಿಸಲಾಗಿದ್ದರೂ, ನೌಕರರಿಗೆ ನೀಡಬೇಕಾದ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತಿಲ್ಲ. ಹೀಗಾಗಿ ಏ.15 ರಂದು ಇಡೀ ದಿನ ಮುಖ್ಯಮಂತ್ರಿ ಮನೆ ಎದರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಜಂಟಿ ಕ್ರಿಯಾಸಮಿತಿ ಹೇಳಿದೆ.