ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿದ್ದ 4,123 ವಿದ್ಯಾರ್ಥಿಗಳ ಪೈಕಿ 3,351 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ.
ಪಿಯು, ಸಾಮಾನ್ಯ ಪದವಿ, ಮೆಡಿಕಲ್, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹2.90 ಕೋಟಿ ಜಮೆ ಮಾಡಲಾಗಿದೆ. 2025 -26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡಳಿಗೆ ₹10 ಕೋಟಿ ಅನುದಾನ ನೀಡಿದ್ದಾರೆ. ಅದಕ್ಕಾಗಿ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಅಭಿನಂದನೆಗಳು. ಎಸ್‌ಎಸ್ಎಲ್‌ಸಿ ಟಾಪರ್‌ಗಳಾದ 694 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗಿದೆ. ಸ್ವ ಉದ್ಯೋಗಕ್ಕಾಗಿ ಸಹಾಯಧನವನ್ನು ಒದಗಿಸಲಾಗುತ್ತಿದೆ ಎಂದರು.