ಸುದ್ದಿ

ಮೆಟ್ರೋ ಟಿಕೆಟ್ ದರ ಏರಿಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ; ಕಾಯ್ದೆ ಪ್ರಕಾರ ದರ ಏರಿಕೆ ಸರಿ: ಹೈಕೋರ್ಟ್

Share It

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಕಾನೂನು ಬಾಹಿರವಾಗಿ ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ.71ರವರೆಗೆ ಏರಿಕೆ ಮಾಡಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಆದೇಶಿಸಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ಸನತ್ ಕುಮಾರ್‌ಶೆಟ್ಟಿ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ, ಮೆಟ್ರೋ ರೈಲ್ವೆ ಕಾಯ್ದೆ-2002ರ ಸೆಕ್ಷನ್ 33 ಅಡಿಯಲ್ಲಿ ಶುಲ್ಕ ನಿಗದಿ ಮತ್ತು ಪರಿಷ್ಕರಣೆಗೆ ಅವಕಾಶವಿದೆ. ಇದೇ ಕಾಯ್ದೆಯಡಿ ಪ್ರಸ್ತುತ ದರ ಏರಿಕೆ ಮಾಡಲಾಗಿದೆ.

ಮೆಟ್ರೋ ಆಡಳಿತ ಕಾಲ ಕಾಲಕ್ಕೆ ದರವನ್ನು ದರವನ್ನು ನಿಗದಿಪಡಿಸಲು ಅಧಿಕಾರ ಹೊಂದಿದೆ. ದರ ನಿಗದಿಗೆ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿ ಎಲ್ಲ ಆಯಾಮಗಳಲ್ಲಿ ಅಧ್ಯಯನ ಮಾಡಿ ಏರಿಕೆಗೆ ಶಿಫಾರಸು ಮಾಡಿದೆ. ಅದನ್ನು ಆಧರಿಸಿಯೇ ದರ ಏರಿಕೆ ಮಾಡಿರುವುದರಿಂದ ನ್ಯಾಯಾಲಯ ಮತ್ತೆ ಮರು ಪರಿಶೀಲನೆ ನಡೆಸಲು ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.


Share It
<p>You cannot copy content of this page</p>