ಬೆಂಗಳೂರು: ರಾಜ್ಯದಲ್ಲಿರುವ ಅನುದಾನಿತ,
ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್ ಟಿಇ ಸೀಟುಗಳ ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದ್ದು, ಏ.5ರಿಂದ ಮೇ 12ರವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಇಲಾಖೆಯ schooleducation.kar.gov.in ವೆಬ್ ಸೈಟ್‌ನಲ್ಲಿ ನಿಗದಿತ ಲಿಂಕ್ ಮೂಲಕ ಪೋಷಕರು ಅರ್ಜಿ ಸಲ್ಲಿಸಬಹುದು.
ಸಲ್ಲಿಕೆಯಾದ ಅರ್ಜಿಗಳ ನೈಜತೆಯನ್ನು ಏ.16ರಿಂದ ಮೇ 15ರವರೆಗೆ ಪರಿಶೀಲಿಸಬೇಕು. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಮೇ 17ರಂದು ಪ್ರಕಟಿಸಬೇಕು. ಆನ್‌ಲೈನ್ ಲಾಟರಿ ಮೂಲಕ ಮೇ 21ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಮೇ 31ರೊಳಗೆ ದಾಖಲಿಸಬೇಕು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ಸೂಚಿಸಿದೆ.