ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ ಆಯ್ದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ 2,50,000 ರು. ಒಳಗಿರಬೇಕು.ಕೊಳೆಗೇರಿ, ಗ್ರಾಮಾಂತರ, ಕಾರ್ಮಿಕರ ಮಕ್ಕಳು, ಕೋವಿಡ್-19ನಿಂದ ಮೃತಪಟ್ಟವರ ಮಕ್ಕಳು ಸೇರಿ ಸಮಾಜದ ತಳ ಸಮುದಾಯದ ಮಕ್ಕಳಿಗೆ ಆದ್ಯತೆ ಮೇಲೆ ಪ್ರವೇಶ ನೀಡಲಾಗುತ್ತದೆ.
ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಅರ್ಜಿ ಪಡೆದುಕೊಳ್ಳಬಹುದು. ಮೇ 5 ಅರ್ಜಿ ಸಲ್ಲಿಸಲು ಕಡೆ ದಿನಾಂಕವಾಗಿದೆ ಹೆಚ್ಚಿನ ಮಾಹಿತಿಗೆ: 9480843019 ಸಂಪರ್ಕಿಸಬಹುದು.