ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.