ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಪ್ರಶ್ನಿಸಿ ವಿಘ್ನೇಶ್ ಶಿಶಿರ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಅಲ ಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ರಾಹುಲ್ ಗಾಂಧಿ ಅವರು ಭಾರತ ಮತ್ತು ಬ್ರಿಟನ್ ನಲ್ಲಿ ದ್ವಿಪೌರತ್ವ ಹೊಂದಿದ್ದು, ಸಂವಿಧಾನದ 84(ಎ) ವಿಧಿಯಡಿ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಅನರ್ಹರಾಗುತ್ತಾರೆ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಇದರ ವಿಚಾರಣೆ ನಡೆಸಿದ ಪೀಠ, ‘ಈ ಪ್ರಕರಣವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿಲ್ಲ’ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿತು.