ಸುದ್ದಿ

ಅಕ್ರಮ ಗಣಿಗಾರಿಕೆ; ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್ ಆದೇಶ

Share It

ಹೈದರಾಬಾದ್‌: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ಆದೇಶಿಸಿದೆ.

ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ – ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.ಅದರಂತೆ ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಓಬಳಾಪುರಂ ಮೈನಿಂಗ್ ಕಂಪನಿ ಮಾಲೀಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.ಇನ್ನು ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲಾ ದಿ. ರಾವ್ ಲಿಂಗಾರೆಡ್ಡಿ ಕೆ.ಮೆಹಫೂಸ್ ಅಲಿ ಖಾನ್ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.

ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು.
ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.


Share It

You cannot copy content of this page