ಸುದ್ದಿ

ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದವರು ಪೊಲೀಸ್ ರಕ್ಷಣೆ ಪಡೆಯುವುದು ಹಕ್ಕಲ್ಲ: ಹೈಕೋರ್ಟ್

Share It

ಇತ್ತೀಚಿನ ದಿನಗಳಲ್ಲಿ ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ತಂದೆ-ತಾಯಿಯ ಒಪ್ಪಿಗೆಯನ್ನು ಪಡೆಯದೆ ಇಷ್ಟಪಟ್ಟವರನ್ನು ಮದುವೆಯಾಗುತ್ತಿದ್ದಾರೆ. ಇದೀಗ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ರಕ್ಷಣೆ ಕೋರಿ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಾಲಯ ಈ ತೀರ್ಪು ನೀಡಿದೆ. ತಮ್ಮ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಸ್ವಂತ ಇಚ್ಛೆಯಿಂದ ವಿವಾಹವಾಗುವ ಜೋಡಿಗೆ ಯಾವುದೇ ಬೆದರಿಕೆ ಇದ್ದರೆ, ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಅರ್ಹ ಪ್ರಕರಣದಲ್ಲಿ ದಂಪತಿಗೆ ನ್ಯಾಯಾಲಯ ಭದ್ರತೆ ಒದಗಿಸಬಹುದು. ಆದರೆ, ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲದಿದ್ದಾಗ, ಅಂತಹ ದಂಪತಿ ಸಮಾಜವನ್ನು ಎದುರಿಸಿ ನಿಲ್ಲುವುದನ್ನು ಕಲಿಯಬೇಕು ಎಂದು ತಿಳಿಸಿದೆ.

ಪೊಲೀಸ್ ರಕ್ಷಣೆ ಮತ್ತು ಪೋಷಕರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶನ ಕೋರಿ ಶ್ರೇಯಾ ಕೇಸರ್ವಾನಿ ಮತ್ತು ಅವರ ಪತಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ದಂಪತಿಗೆ ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲ ಎಂದು ಹೇಳಿದ ನ್ಯಾಯಾಲಯ ರಿಟ್ ಅರ್ಜಿಯನ್ನು ವಜಾ ಮಾಡಿದೆ.


Share It

You cannot copy content of this page