ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ಮೇ 10 ರಂದು ಪ್ರವೇಶ ಪರೀಕ್ಷೆ ನಡೆಸುತ್ತಿದೆ.
ದೇಶಾದ್ಯಂತ 1,31,937 ಅಭ್ಯರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. 28 ರಾಜ್ಯಗಳು, 179 ನಗರಗಳು ಮತ್ತು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ ಸಂಜೆ 4 ಹಾಗೂ ಸಂಜೆ 5.30 ರಿಂದ ರಾತ್ರಿ 8.30 ರವರೆಗೆ ಮೂರು ಹಂತದಲ್ಲಿ ಪರೀಕ್ಷೆ ನಡೆಯಲಿದೆ.