ಸುದ್ದಿ

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಪೊಲೀಸ್‌ ಭದ್ರತೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Share It

ಬೆಂಗಳೂರು: ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ರಕ್ಷಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಸಲ್ಲಿಸಿದ ಅರ್ಜಿಯ ಕುರಿತು ಹೊರಡಿಸಲಾದ ನಿರ್ದೇಶನಗಳಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯದ ಮುಂದೆ ಇರಿಸಲಾದ ಬೆದರಿಕೆ ವಿಶ್ಲೇಷಣಾ ವರದಿಯನ್ನು ಪರಿಶೀಲಿಸಿದ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ರಾಜ್ಯದ ನಿರ್ದಿಷ್ಟ ಸ್ಥಳಗಳಲ್ಲಿ ಮಹೇಶ್ ಜೋಶಿಯವರಿಗೆ ಭದ್ರತೆ ನೀಡಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರು ಗ್ರಹಿಸಿದ್ದಾರೆ. ರಾಜ್ಯದ ಹಲವಾರು ಸ್ಥಳಗಳಲ್ಲಿ ಬೆದರಿಕೆ ಇರುವುದರಿಂದ, ಅರ್ಜಿದಾರರು ರಾಜ್ಯದೊಳಗೆ ಪ್ರಯಾಣಿಸುವಾಗ, ಈ ಹಿಂದೆ ಹೊರಡಿಸಿದ ಆದೇಶದ ಪ್ರಕಾರ ಅರ್ಜಿದಾರರಿಗೆ ಪೊಲೀಸ್ ರಕ್ಷಣೆ ನೀಡುವಂತೆ ಮತ್ತು ಖಾಸಗಿ ಭದ್ರತೆ, ಗನ್ ಮ್ಯಾನ್ ಸೇವೆಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವುದು ಸೂಕ್ತವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ


Share It

You cannot copy content of this page