ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ.
ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಕಾದಾಟದ ವೇಳೆ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದ್ದು, ಯೋಧ ಮುರಳಿ ನಾಯ್ಕ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ.
ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಯೋಧ ಮುರಳಿ ನಾಯ್ಕ ಹುತಾತ್ಮರಾಗಿದ್ದಾರೆ.