ಸುದ್ದಿ

ನಿಲ್ಲದ ವರುಣನ ಆರ್ಭಟ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲಟ್೯

Share It

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮಂಗಳವಾರ ಸಂಜೆ ಭಾರತದ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಏಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಿಸಿದೆ.

ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ, ಆಲಿಕಲ್ಲು ಮಳೆ ಬೀಳಲಿದೆ. ಎಲ್ಲಾ ಏಳು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹವಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Share It

You cannot copy content of this page