ಸುದ್ದಿ

ನಕಲಿ ಪ್ರಮಾಣ ಪತ್ರ ನೀಡುತ್ತಿದ್ದ ವೈದ್ಯಾಧಿಕಾರಿ ಸಸ್ಪೆಂಡ್

Share It

ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡು ತ್ತಿದ್ದ ಆರೋಪದ ಮೇಲೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಶಂಕರ್‌ಅವರನ್ನು ಅಮಾನತುಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬಿಎಂಸಿರ್‌ಐ ನಿರ್ದೇಶಕರು ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿರುವ ವರದಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಕೆ.ಎನ್. ಶಂಕರ್ ಅವರು ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡಿರುವ ಹಾಗೂ ಭ್ರಷ್ಟಾ ಚಾರ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾರೆ.
ಸಂಬಂಧ ಇಲಾಖಾ ವಿಚಾರಣೆ ಹಾಗೂ ದಂಡನೆ ವಿಧಿಸಲು ಇಲಾಖೆ ಪ್ರಧಾನ ಕಾರ್ಯದರ್ಶಿ ಅವರೇ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಇಲಾಖೆ ಪ್ರಧಾನ ಕಾವ್ಯದರ್ಶಿ ಮೊಹಮ್ಮದ್ ಮೊಹಿಸಿನ್ ಅವರು, ಡಾ.ಕೆ.ಎನ್.ಶಂಕರ್ ಅವರು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಬೈಲಾದ ನೇಮಕಾತಿ ನಿಯಮಗಳ ಅನ್ವಯ ಅಧಿಕಾರ ಚಲಾಯಿಸಿ ಅಮಾನತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.


Share It

You cannot copy content of this page