ಸುದ್ದಿ

ಲಂಚ ಪ್ರಕರಣ: ಬಿಬಿಎಂಪಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

Share It

ಬೆಂಗಳೂರು: ಬಿಬಿಎಂಪಿಯ ಇಬ್ಬರು ಇಂಜಿನಿಯರ್‌ಗಳು ವ್ಯಕ್ತಿಯೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್‌ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳ ಬಂಧಿಸಿ, ಲಂಚದ ಹಣ ಜಪ್ತಿ ಮಾಡಿದ್ದಾರೆ.

ಎನ್‌ಒಸಿ ನೀಡಲು ಸಂಜಯ್ ಎಂಬುವವರಿಗೆ 10 ಲಕ್ಷ ರೂಪಾಯಿ ಲಂಚ ನೀಡುವಂತೆ ಈ ಇಬ್ಬರು ಇಂಜಿನಿಯರ್ ಗಳು ಬೇಡಿಕೆ ಇಟ್ಟಿದ್ದರು. ಅದರಂತೆ ಮುಂಗಡವಾಗಿ 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.


Share It

You cannot copy content of this page