ಬೆಂಗಳೂರು: ಖಾಸಗಿ ಸಂಸ್ಥೆಯ ಜತೆಗೆ ಬಿಎಂಆರ್‌ಸಿಎಲ್ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೆಟ್ರೋ ವ್ಯಾಪ್ತಿಗೆ ಬರುವ ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದ್ದು ಈ ನಡೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ತನ್ನ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಮೂತ್ರ ವಿಸರ್ಜನೆಗೆ 2 ರು., ಮಲ ವಿಸರ್ಜನೆಗೆ 5 ರು.
ಶುಲ್ಕ ವಿಧಿಸಿದ್ದು, ತನ್ನ ವ್ಯಾಪ್ತಿಯ ಶೌಚಾಲಯಗಳ ನಿರ್ವಹಣೆಗೆ ಖಾಸಗಿ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡಿದೆ.
ನಮ್ಮ ಮೆಟ್ರೋ ಆರಂಭದಿಂದಲೂ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ಶೌಚಾಲಯ ಸೌಲಭ್ಯ ಇತ್ತು. ಈಗ ಏಕಾಏಕಿ ಶೌಚಾಲಯ ದರ ನಿಗಧಿ ಮಾಡಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಇನ್ನು ಮುಂದೆ ನ್ಯಾಷನಲ್ ಕಾಲೇಜು, ಲಾಲ್‌ಬಾಗ್,
ಸೌಥ್ ಆ್ಯಂಡ್ ಸರ್ಕಲ್, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಡಾ.ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಕಬ್ಬನ್ ಪಾರ್ಕ್ ಮತ್ತು ಮೆಜೆಸ್ಟಿಕ್ ನಿಲ್ದಾಣಗಳಲ್ಲಿನ ಶೌಚಾಲಯಗಳ ಬಳಕೆಗೆ ಪ್ರಯಾಣಿಕರು ಹಣ ಪಾವತಿಸಬೇಕಾಗಿದೆ.