ಸುದ್ದಿ

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

Share It

2025-26ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗೆ 40000, ಪ್ರೌಢಶಾಲೆಗೆ 11000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕಾಯಂ ಶಿಕ್ಷಕರ ನೇಮಕಾತಿ ಬದಲು ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಶುಕ್ರವಾರ ಆ ದೇಶಿಸಿದೆ.

ಆದೇಶದಂತೆ ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢ ಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ಒಟ್ಟು 51 ಸಾವಿರ ಅತಿಥಿ ಶಿಕ್ಷಕರನ್ನು ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆದೇಶಿಸಿದೆ.

51,000 ಅತಿಥಿ ಶಿಕ್ಷಕರುಗಳ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಉಪನ್ಯಾಸಕರ ಜಿಲ್ಲಾ/ತಾಲೂಕುವಾರು ವಿವರಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖಾ ಆಯುಕ್ತರು, ಅಪರ ಆಯುಕ್ತರು ಮತ್ತು ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.


Share It

You cannot copy content of this page