ತುಮಕೂರು: ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ ಆರೋಪದ ಮೇಲೆ ಕುಣಿಗಲ್ ತಾಲೂಕು ಅಮೃತೂರು ಪೊಲೀಸ್ ಠಾಣೆಯ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ಎಸ್ಪಿ ಆದೇಶಿಸಿದ್ದಾರೆ.
ಪೇದೆಗಳಾದ ಭಗವಂತರಾಯ ಬಿರಾದಾರ್, ನಾಗಭೂಷಣ್ ಅಮಾನತುಗೊಂಡವರು. ಮಹಿಳಾ ಸಿಬ್ಬಂದಿಗೆ ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಪೇದೆ ಭಗವಂತರಾಯ ಬಿರಾದಾರ್ ಬೇರೊಂದು ಯುವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಇಬ್ಬರು ಪೇದೆಗಳು ಮಹಿಳಾ ಸಿಬ್ಬಂದಿಯನ್ನು ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಈ ಸಂಬಂಧ ಇಬ್ಬರು ಪೇದೆಗಳ ವಿರುದ್ಧ ದೂರು ದಾಖಲಾಗಿದ್ದು ಅಮಾನತು ಮಾಡಲಾಗಿದೆ.