ಸುದ್ದಿ

ಹಿರಿಯ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ನಿಧನ

Share It

ಬೆಂಗಳೂರು: ಕನ್ನಡ ಸಾಹಿತ್ಯದಲ್ಲಿ ಎಚ್ಎಸ್ ವಿ ಎಂದೇ ಕರೆಸಿಕೊಳ್ಳುತ್ತಿದ್ದ ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ (80) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಕೆಲದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರಿಗೆ ನಾಲ್ವರು ಪುತ್ರರಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ಎಚ್.ಎಸ್. ವೆಂಕಟೇಶಮೂರ್ತಿ ಅವರು, 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನೇಮಕಗೊಂಡರು. ಮೂರು ದಶಕಗಳ ಕಾಲ ಅಲ್ಲಿ ಕಾರ್ಯನಿರ್ವಹಿಸಿದ ಅವರು, ಇದೇ ಕಾಲೇಜಿನಲ್ಲಿ 2000ನೇ ಇಸವಿಯಲ್ಲಿ ನಿವೃತ್ತರಾಗಿದ್ದರು.

ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿ ಮೊದಲಾದ ಪ್ರಕಾರಗಳಲ್ಲಿ ಅವರು ಸಾಹಿತ್ಯ ಕೃತಿಗಳನ್ನು ಸೃಷ್ಟಿಸಿದ್ದಾರೆ. ತಮ್ಮ ಸಾಹಿತ್ಯ ಸೇವೆಗಾಗಿ ಅನೇಕ ಪ್ರಶಸ್ತಿ ಪುರಸ್ಕೃತರಾಗಿರುವ ಎಚ್ಎಸ್ ವಿ ಅವರು, ಕಲಬುರಗಿಯಲ್ಲಿ ನಡೆದ 85ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.


Share It

You cannot copy content of this page