ತಮಿಳುನಾಡು: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿ ಜ್ಞಾನಶೇಖರನ್‌ಗೆ ಚೆನ್ನೈನ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 90,000 ರೂ.ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಕ್ಷಮಾದಾನಕ್ಕೆ ಅರ್ಹತೆ ಪಡೆಯುವ ಮುನ್ನ ಆರೋಪಿ ಕನಿಷ್ಠ 30 ವರ್ಷ ಜೈಲು ಶಿಕ್ಷೆ ಅನುಭವಿಸಿರಬೇಕು ಎಂದು ಮಹಿಳಾ ನ್ಯಾಯಾಲಯದ ನ್ಯಾಯಾಧೀಶೆ ಎಂ ರಾಜಲಕ್ಷ್ಮಿ ಅವರು ಆದೇಶಿಸಿರುವುದು ವರದಿಯಾಗಿದೆ.
ಕಳೆದ ಡಿಸೆಂಬರ್‌ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿರಬೇಕಾಗುತ್ತದೆ ಎಂದು ನ್ಯಾಯಾಧೀಶ ಎಂ. ರಾಜಲಕ್ಷ್ಮಿ ಹೇಳಿದರು. ಲೈಂಗಿಕ ದೌರ್ಜನ್ಯ ಅತ್ಯಾಚಾರ, ಬೆದರಿಕೆ ಮತ್ತು ಅಪಹರಣ ಸೇರಿದಂತೆ ಎಲ್ಲಾ 11 ಆರೋಪಗಳಲ್ಲಿ ಜ್ಞಾನಶೇಖರನ್ ತಪ್ಪಿತಸ್ಥನೆಂದು ನ್ಯಾಯಾಧೀಶರು ಕಳೆದ ವಾರ ಘೋಷಿಸಿದರು. ಪ್ರಕರಣದಲ್ಲಿ ಕನಿಷ್ಠ 29 ಸಾಕ್ಷಿಗಳು ಸಾಕ್ಷ್ಯ ನುಡಿದರು ಮತ್ತು ಪೊಲೀಸರು 100 ಪುಟಗಳ ಆರೋಪಪಟ್ಟಿ ಸಲ್ಲಿಸಿದರು.