ಬೆಂಗಳೂರು:ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ.ಈ ದುರಂತಕ್ಕೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿದ್ದಾರೆ
ಸ್ನೇಹಮಯಿ ಕೃಷ್ಣ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸಿಎಂ, ಡಿಸಿಎಂ ವಿರುದ್ಧ ದೂರು ನೀಡಿದ್ದು, “ಇದು ಸರ್ಕಾರದ ಬೇಜವಾಬ್ದಾರಿಯಿಂದ ಉಂಟಾದ ದುರಂತ. ಆರ್ಸಿಬಿ ರಾಜ್ಯವನ್ನು ಪ್ರತಿನಿಧಿಸುವ ತಂಡವಲ್ಲ. ಇದು ಮದ್ಯ ಮಾರಾಟಗಾರರು ಖರೀದಿಸಿದ ಖಾಸಗಿ ತಂಡ. ಹೀಗಾಗಿ ರಾಜ್ಯ ಸರ್ಕಾರ ಅವರನ್ನು ಆಹ್ವಾನಿಸಿ ಸನ್ಮಾನಿಸುವ ಅಗತ್ಯವಿರಲಿಲ್ಲ” ಎಂದು ಹೇಳಿದ್ದಾರೆ.