ಬೆಂಗಳೂರು: ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 18 ಅಂಗನವಾಡಿ ಕಾರ್ಯಕರ್ತೆಯರು, 92 ಸಹಾಯಕಿಯರ ಖಾಲಿ ಹುದ್ದೆಗೆ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ರಾಜ್ಯ ಯೋಜನೆ, 1ನೇ ಮಹಡಿ, ಬಿಬಿಎಂಪಿ ಕಟ್ಟಡ, ಎನ್.ಆರ್. ಕಾಲೋನಿ, ಬೆಂಗಳೂರು ಕಚೇರಿಯಲ್ಲಿ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂ.30ರ ಸಂಜೆ 5.30ರ ಒಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ 080 – 26601917 ಸಂಪರ್ಕಿಸಬಹುದಾಗಿದೆ.