ಸುದ್ದಿ

ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ಸರ್ಕಾರದಿಂದಲೇ ನಿರ್ವಹಣೆ

Share It

ಬೆಂಗಳೂರು: ಜಿವಿಕೆ ಹೆಸರಿನ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ 108 ಆ್ಯಂಬುಲೆನ್ಸ್’ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವ ಅನುಮೋದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರ ಖಾಸಗಿ ಪಾಲುದಾರರಾದ ಜಿವಿಕೆ-ಇಎಂಆರ್‌ಐ ಸಂಸ್ಥೆಯಿಂದ ನಿರ್ವಹಣೆ ಹಿಂಪಡೆದಿದ್ದು, 108 ಆ್ಯಂಬುಲೆನ್ಸ್‌ನ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸಲಾಗಿದೆ.

ನಿರ್ವಹಣೆಗೆ ಕೇಂದ್ರದ 112 ಎನ್ ಜಿ-ಇಆರ್‌ಎಸ್‌ಎಸ್ ತಂತ್ರಾಂಶ ಬಳಸಿಕೊಳ್ಳಲು ತೀರ್ಮಾನಿಸಿದ್ದು, ಕಮಾಂಡ್ ಮತ್ತು ಕಂಟ್ರೋಲ್ 5 ವರ್ಷಗಳ ಅವಧಿಗೆ ಸ್ಥಾಪಿಸಲು ಕೆಟಿಟಿಪಿ ಕಾಯ್ದೆ ಕಲಂ 4(ಜಿ) ಅಡಿ ವಿನಾಯ್ತಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಆದೇಶಿಸಿದೆ.

108 ಅಧೀನದಲ್ಲಿರುವ ಒಟ್ಟು 715 ಆ್ಯಂಬುಲೆನ್ಸ್ ನಿರ್ವಹಣೆಗಾಗಿ ಕಮಾಂಡ್ ಕಂಟ್ರೋಲ್ ಸೆಂಟರ್‌ ತೆರೆಯಲಾಗುವುದು. ಆರಂಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತದೆ. ನಂತರದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಆರಂಭವಾಗಲಿದೆ.1000ಕ್ಕೂ ಹೆಚ್ಚು ರಾಜ್ಯ ಆ್ಯಂಬುಲೆನ್ಸ್‌ಗಳನ್ನು ಕೂಡಾ ಕಮಾಂಡ್ ಸೆಂಟರ್‌ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


Share It

You cannot copy content of this page