ಬೆಂಗಳೂರು: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಸ್ವಯಂಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು- ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿವಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿ ಸಾಲಸೌಲಭ್ಯ ಪಡೆಯಲು ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಿಸಿದ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://www.sevasindu.karnataka.gov.in ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು https://www.kaushalkar.com ಜಾಲತಾಣದಲ್ಲಿ ಜೂ.30ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ದೂ: 080- 2353 9601 ಸಂಪರ್ಕಿಸಬಹುದು.