ಬೆಂಗಳೂರು: 2025-26ನೇ ಸಾಲಿಗೆ ಹೊಸದಾಗಿ ಖಾಸಗಿ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ನೋಂದಣಿಗೆ ಹಾಗೂ ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಈಗಾಗಲೇ ಶಾಲೆಗಳು ಆರಂಭಗೊಂಡು ಪಠ್ಯ ಚಟುವಟಿಕೆಗಳನ್ನು ಆರಂಭಿಸಿರುವ ಹೊತ್ತಿನಲ್ಲಿ ಅನಧಿಕೃತ ಶಾಲೆಗಳ ಸಕ್ರಮಕ್ಕೆ ಮತ್ತು ಹೊಸದಾಗಿ ಶಾಲೆ ಆರಂಭಿಸಲು ಅವಕಾಶ ನೀಡಿ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಶಿಕ್ಷಣ ತಜ್ಞರಲ್ಲಿ ಅಚ್ಚರಿ ಮೂಡಿಸಿದೆ.
ಈಗಾಗಲೇ 2025-26ನೇ ಶೈಕ್ಷಣಿಕ ಸಾಲಿಗೆ ಶಾಲಾ ನೋಂದಣಿ ಮತ್ತು ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಸಲ್ಲಿಸಿದ್ದ ಅರ್ಜಿಗಳು ತಿರಸ್ಕೃತವಾಗಿದ್ದರೆ ಮತ್ತೆ ಅರ್ಜಿ ಸಲ್ಲಿಸಲು ಶಿಕ್ಷಣ ಸಂಸ್ಥೆಗಳ ಆಡಳಿತಮಂಡಳಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ 2025-26ನೇ ಶೈಕ್ಷಣಿಕ ಸಾಲಿಗೆ ಶಾಲಾ ನೋಂದಾವಣಿ ಮತ್ತು ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡ ಆಡಳಿತ ಮಂಡಳಿಗಳಿಗೆ ಮತ್ತು ಹೊಸದಾಗಿ ಅರ್ಜಿ ಸಲ್ಲಿಸುವ ಆಡಳಿತ ಮಂಡಳಿಗೆಳಿಗೆ ಈ ಅವಕಾಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ