ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಅಕ್ಷಯ್‌ನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.
ಇದೇ ಜೂನ್ 15ರಂದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ. 60 ಗಂಟೆ ಕಳೆದರೂ ಮೆದುಳು ಸ್ಪಂದಿಸದೇ ಇರುವ ಕಾರಣ ಮೆದುಳು ನಿಷ್ಕ್ರಿಯವಾಗಿದೆ ಎಂದು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತುಳಿದು ಬಂದಿದೆ.
ಸಹಜವಾಗಿ ಶಸ್ತ್ರಚಿಕಿತ್ಸೆ ಮುಗಿದು 48 ಗಂಟೆಗಳ ನಂತರವು ಮೆದುಳು ಸ್ಪಂದಿಸದೇ ಇದ್ದರೆ ಮೆದುಳು ನಿಷ್ಕ್ರಿಯ ಎಂದು ಪರಿಗಣಿಸಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದ್ರೆ ಅಕ್ಷಯ್ ಕೇಸ್‌ನಲ್ಲಿ
ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು.
ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು.
ಬಿಬಿಎಂಪಿ ನಿರ್ಲಕ್ಷ್ಯ: ಸದ್ಯಕ್ಕೆ ಅಕ್ಷಯ್ ಬದುಕುಳಿಯುವ ಬಗ್ಗೆ ಯಾವುದೇ ಭರವಸೆ ಕೊಡೋದಕ್ಕಾಗಲ್ಲ ಅಂತ ವೈದ್ಯರು ಹೇಳಿದ್ದಾರೆ. ಅಕ್ಷಯ್ ಆಸ್ಪತ್ರೆಗೆ ಸೇರಿ 4 ದಿನ ಆಗ್ತಿದ್ರೂ ಬಿಬಿಎಂಪಿ ಚಿಕಿತ್ಸಾ ವೆಚ್ಚ ಭರಿಸಿಲ್ಲ. ಕುಟುಂಬಸ್ಥರೇ ಆಸ್ಪತ್ರೆಗೆ ಈವರೆಗೆ 1,30,000ಕ್ಕೂ ಹೆಚ್ಚು ಬಿಲ್ ಕಟ್ಟಿದ್ದಾರೆ ತಿಳಿದುಬಂದಿದೆ.