ಬೆಂಗಳೂರು: ಸಮಾಜ ಕಲ್ಯಾಣ ಇಲಾಖಾ
ವತಿಯಿಂದ 2025-26ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿ ಪಡೆಯಲು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಕಾನೂನು ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ವರ್ಷದ ಎಲ್ಲಾ ದಿನಗಳು ಸಲ್ಲಿಸಬಹುದು. ಅಭ್ಯರ್ಥಿಗಳು 40 ವರ್ಷ ವಯೋಮಿತಿ ಯೊಳಗಿರಬೇಕು. ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ವಾರ್ಷಿಕ ಆದಾಯ ಎರಡು ಲಕ್ಷದೊಳಗಿರಬೇಕು. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು, ಮಾಸಿಕ 10,000 ರು. ಗಳ ಶಿಷ್ಯ ವೇತನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.