ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ವಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್‌ಆರ್‌ಆರ್‌ಒ) ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ಮಾಹಿತಿ ನೀಡುತ್ತಾರೆ. ಅವರನ್ನು ಪತ್ತೆ ಮಾಡಿ ಗಡಿಪಾರು ಮಾಡಲು ಕ್ರಮಕೈಗೊಳ್ಳಲಾಗುತ್ತದೆ. ಇದು ನಿರಂತರ ಪ್ರಕ್ರಿಯೆಯಾ ಗಿದ್ದು, ಒಂದು ದಿನದಲ್ಲಿ ಮಾಡಿ ನಿಲ್ಲಿಸಲು ಸಾಧ್ಯವಿಲ್ಲ. ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂಬ ಆರೋಪವಿದ್ದು, ಅಂಥವರು ಕಂಡುಬಂದರೆ ವಶಕ್ಕೆ ತೆಗೆದುಕೊಂಡು ತಕ್ಷಣ ಗಡಿಪಾರು ಮಾಡುತ್ತೇವೆ ಎಂದು ಹೇಳಿದರು.