ಸುದ್ದಿ

ರೇಣುಕಾಸ್ವಾಮಿ‌ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ ಬೆಳಕಿಗೆ; ಕಿಡ್ನ್ಯಾಪ್ ಮಾಡಿ ಭೀಕರ ಹಲ್ಲೆ

Share It

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಪ್ರಿಯತಮೆಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.

ಈ ಘಟನೆ ಹೆಸರಘಟ್ಟದಲ್ಲಿ ನಡೆದಿದೆ ಎನ್ನಲಾಗಿದ್ದು, ಸುಮಾರು 8 ರಿಂದ 10 ಜನ ಪುಂಡರ ಗ್ಯಾಂಗ್ ವ್ಯಕ್ಯಿಯೊಬ್ಬನನ್ನು ಅಪಹರಿಸಿ ಮನಬಂದಂತೆ ಥಳಿಸಿದ್ದಾರೆ. ಈ ಹಲ್ಲೆಯ ವಿಡಿಯೋ ಅನ್ನು ಆರೋಪಿಯೊಬ್ಬ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಏನಿದು ಪ್ರಕರಣ?:ಕುಶಾಲ್ ಎರಡು ವರ್ಷಗಳ ಕಾಲ ಕಾಲೇಜು ವಿದ್ಯಾರ್ಥಿನಿಯೊಬ್ಬಳೊಂದಿಗೆ ಸ್ನೇಹ ಸಂಬಂಧ ಹೊಂದಿದ್ದನು. ಅದರೆ ಕೆಲವು ತಿಂಗಳ ಹಿಂದೆ ಈ ಜೋಡಿ ಕಾರಣಾಂತರಗಳಿಂದ ಬೇರ್ಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಹುಡುಗಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿಕೊಂಡಳು. ಇದರಿಂದ ಕೋಪಗೊಂಡ ಕುಶಾಲ್ ಹುಡುಗಿಗೆ ಕೆಲವು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಈ ವೇಳೆ ಯುವತಿ ತನ್ನ ಗೆಳೆಯನಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಕುಶಾಲ್ ಬಗ್ಗೆ ಆಕ್ರೋಶಗೊಂಡ ಆಕೆಯ ಗೆಳೆಯ ತನ್ನ ಸ್ನೇಹಿತರೊಂದಿಗೆ ಸೇರಿ ದಾಳಿಗೆ ಯೋಜನೆ ರೂಪಿಸಿದ್ದ ಅದರಂತೆ ಇವರು ಸಮಸ್ಯೆ ಪರಿಹರಿಸುವ ನೆಪದಲ್ಲಿ ಆತನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದು ಆತ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಒಟ್ಟು ಎಂಟು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.


Share It

You cannot copy content of this page