ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರಬಹುದಾದ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ರಾಜ್ಯ ಮಹಿಳಾ ಆಯೋಗ ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು,ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಬೇಕು ಎಂದು ಮಹಿಳಾ ಆಯೋಗ ಮನವಿ ಮಾಡಿದೆ.