ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ಸೇರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.
ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಉಪನ್ಯಾಸಕ ಮುಂದುವರಿಸಿದ್ದ ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ.
ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ. ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.