ಸುದ್ದಿ

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಕೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ: ರೈತರ ಹೋರಾಟ ಯಶಸ್ವಿ

Share It

ಬೆಂಗಳೂರು: ರೈತರ ತೀವ್ರತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನರಾಯಪಟ್ಟಣ ಸುತ್ತಮುತ್ತಲಿನ 13 ಗ್ರಾಮಗಳ ಭೂ ಸ್ವಾಧೀನಕ್ಕೆ ಕೆಐಎಡಿಬಿಗೆ ಭೂಮಿ ನೀಡಲು ರೈತರು, ಸಂಘಟನೆಗಳು ಒಪ್ಪುತ್ತಿಲ್ಲ. ರಾಜ್ಯ ಸರ್ಕಾರ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.


Share It

You cannot copy content of this page