ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಭಕ್ರು ಅವರನ್ನು ನೇಮಕಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದ್ದು, ದೆಹಲಿಯಲ್ಲಿ ಶಿಕ್ಷಣ ಪಡೆದಿದ್ದಾರೆ. 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರುವ ಇವರು, 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದಿದ್ದಾರೆ. ನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿ, ಸೇವೆ ಆರಂಭಿಸಿದ್ದರು.
ನ್ಯಾ. ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದ ಅವರು, 2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೀಗ, ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸಿನಂತೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ