ಸುದ್ದಿ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆ.5ರಿಂದ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ

Share It

ಬೆಂಗಳೂರು: 38 ತಿಂಗಳ ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 5ರಂದು ಮುಷ್ಕರಕ್ಕೆ ಕರೆ ನೀಡಿದೆ.

ಮುಷ್ಕರಕ್ಕೆ ಕೆಎಸ್ ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮಾಡಲು ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಈ ಸಂಬಂಧ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದ್ದು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ. 4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಮುಖಂಡ ಅನಂತ ಸುಬ್ಬರಾವ್ ಹೇಳಿದರು.


Share It

You cannot copy content of this page