ಮೈಸೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ತಿಳಿಸಿದರು.
ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಅಸಹಜ ಸಾವು ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.