ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಫ್; ಇ.ಡಿ ಮೇಲ್ಮನವಿ ವಜಾ

Share It

ನವದೆಹಲಿ: ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಪಾರ್ವತಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್.ಗವಾಯಿ ಅವರ ನೇತೃತ್ವದ ಪೀಠ ಮೇಲ್ಮನವಿ ಅರ್ಜಿ ವಜಾಗೊಳಿಸಿದೆ. ಮುಂದುವರೆದು ‘ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ,ಇದರಲ್ಲಿ ನಿಮಗೆ ಏನು ಕೆಲಸ ಎಂದು ಇ.ಡಿಗೆ ಪೀಠ ಖಾರವಾಗಿ ಪ್ರಶ್ನಿಸಿದೆ. ಮುಂದುವರೆದು ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ. ಇಲ್ಲದಿದ್ದರೆ ಇ.ಡಿ ಬಗ್ಗೆ ತೀಕ್ಷ್ಣ ಟಿಪ್ಪಣಿ ಮಾಡಬೇಕಾದಿತು. ದೇಶದಾದ್ಯಂತ ನೀವು ಇದನ್ನು ಮುಂದುವರಿಸಕೂಡದು ಎಂದು ಖಾರವಾಗಿ ಪ್ರತಿಕ್ರಿಯಿಸಿದೆ. ಏಕಸದಸ್ಯ ಪೀಠ ನೀಡಿರುವ ತೀರ್ಪಿನಲ್ಲಿ ನಮಗೆ ಲೋಪ ಕಾಣುತ್ತಿಲ್ಲ. ಹೀಗಾಗಿ ಇ.ಡಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇ.ಡಿ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದ ತೀರ್ಪಿನ ವಿರುದ್ಧ ಇ.ಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಿತು.


Share It

You cannot copy content of this page