ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿಯ ಮೂವರು ಶಾಸಕರು ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಬೆಸ್ಕಾಂ ಅಧ್ಯಕ್ಷರು ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸ್ಮಾರ್ಟ್ ಮೀಟರ್ ಅಳವಡಿಕೆಗೆ ಟೆಂಡರ್ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಈ ಕುರಿತಂತೆ ಆದೇಶಿಸಿದ್ದಾರೆ.
ಆರೋಪಿಗಳ ವಿರುದ್ಧದ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆ ಯನ್ನು ಅಗಸ್ಟ್ 11ಕ್ಕೆ ಮುಂದೂಡಿದ್ದಾರೆ.
ದೂರಿನಲ್ಲಿ ಸಚಿವ ಕೆ.ಜೆ. ಜಾರ್ಜ್, ಇಂಧನ ಇಲಾಖೆಯ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಅವರನ್ನು ಹೆಸರಿಸಲಾಗಿದೆ. ಎಚ್.ಜೆ.ರಮೇಶ್ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.