ಮೈಸೂರು: ನಗರದಲ್ಲಿ ಮಾದಕ ವಸ್ತು ತಯಾರಿಕಾ ಘಟಕ ನಡೆಯುತ್ತಿದ್ದರು ಪತ್ತೆಹಚ್ಚಿ, ಕ್ರಮಜರುಗಿಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಎನ್.ಆರ್. ಠಾಣೆಯ ಇನ್‌ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಬನ್ನಿಮಂಟಪ ವರ್ತುಲ ರಸ್ತೆಗೆ ಹೊಂದಿಕೊಂಡಿರುವ ಗ್ಯಾರೇಜ್‌ನಲ್ಲಿ ಮಾದಕವಸ್ತು ತಯಾರಿಸಲಾಗುತಿತ್ತು. ಡ್ರಗ್ ಪೆಡ್ಲರ್ ನೀಡಿದ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದರು. ಎನ್.ಆರ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟಕ ಕಾರ್ಯನಿರ್ವಹಿಸುತ್ತಿದ್ದರೂ ಮಾಹಿತಿ ಕಲೆ ಹಾಕುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅಮಾನತು ಆದೇಶ ಹೊರಡಿಸಿದ್ದಾರೆ.