ಚಿಕಿತ್ಸೆ ಪಡೆಯುವ ಸಲುವಾಗಿ ಖಾಸಗಿ ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಉತ್ತರ ಪ್ರದೇಶದ ಬಲರಾಂಪುರದ ವಿಮ್ಲಾ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಆರೋಪಿ ಯೋಗೀಶ್ ಪಾಂಡೆ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಾಹಿತಿಯಿಂದ ತಿಳಿದು ಬಂದಿದೆ.
ಸುಮಾರು 28 ವರ್ಷದ ಸಂತ್ರಸ್ತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ಆಕೆಗೆ ಅರವಳಿಕೆ ಇಂಜೆಕ್ಷನ್ ನೀಡಿ ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾನೆ. ಪ್ರಜ್ಞೆ ಬಂದ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.