ಬೆಂಗಳೂರು: ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹರಡಿದವರ ವಿರುದ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್, ಮಾಡಲಾಗಿದೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗಿದ್ದು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಅವಹೇಳನಕಾರಿ ಸಂದೇಶಗಳನ್ನು ತಕ್ಷಣ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ.