ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆದಾಯ,ಅನುದಾನ ಸೇರಿದಂತೆ ಹಣಕಾಸಿನ ಅವ್ಯವಹಾರ ಸಂಬಂಧ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ವಿರುದ್ಧ ವಿವಿಧ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಆರು ಅಧಿಕಾರಿಗಳ ಸಮಿತಿ ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶಿಸಿದೆ.
ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಬ್ಬರು ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರನ್ನೊಳಗೊಂಡ ಸಮಿತಿ ರಚಿಸಿ 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ಬಲಾದ ಅವ್ಯವಹಾರಗಳ ಬಗ್ಗೆ ಪರಿಶೀಲಿಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಅನೇಕ ದೂರುದಾರರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮಿತಿ ರಚಿಸಿ ತನಿಖೆ ನಡೆಸುತ್ತಿದೆ.