ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ.
ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 29 ರಂದೇ ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಲಾಗಿತ್ತು. ಇದೀಗ ಪ್ರಜ್ವಲ್ ಅಪರಾಧಿ ಎಂದು ನ್ಯಾಯಾಲಯ ತೀರ್ಮಾನಿಸಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಇನ್ನುಳಿದ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.