ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಿತ್ತೇವೆ: ಸಚಿವ ಪರಮೇಶ್ವರ್

Share It

ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ವಾಹನಗಳ ಟೋಯಿಂಗ್ ವ್ಯವಸ್ಥೆ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪಾರ್ಕಿಂಗ್ ಸಮಸ್ಯೆ ತೀವ್ರ ಸಮಸ್ಯೆಯಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದನ್ನು ಸಂಪಡಿಸಲು ಟೋಯಿಂಗ್ ಅನಿವಾರ್ಯವಾಗಿದೆ. ಈ ಬಾರಿ ಬೋಯಿಂಗ್‌ ಕಾರ್ಯವನ್ನು ಇಲಾಖೆಯಿಂದಲೇ ನಡೆಸಲಾಗುವುದು. ಯಾವುದೇ ಗುತ್ತಿಗೆದಾರರಿಗೆ ವಹಿಸುವುದಿಲ್ಲ, ಟೋಯಿಂಗ್ ಕಾರ್ಯಾಚರಣೆ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಪೊಲೀಸರು ತಾಳ್ಮೆಯಿಂದ ವರ್ತಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಇದ್ದ ಟೋಯಿಂಗ್ ವ್ಯವಸ್ಥೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಫೆಬ್ರವರಿ 2022ರಲ್ಲಿ ಟೋಯಿಂಗ್ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಪ್ರಸ್ತುತ ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲುಗಡೆ ಮಾಡಿದರೆ, 1 ಸಾವಿರ ರು. ದಂಡ ನಿಗದಿಪಡಿಸಲಾಗಿತ್ತು. ಇದೀಗ ಟೋಯಿಂಗ್ ಜಾರಿಯಾದರೆ 1.500 . 1.750 ರು. ಸಂಗ್ರಹಿಸಲಾಗುತ್ತದೆ ಎಂದರು.


Share It

You cannot copy content of this page